ಕರ್ನಾಟಕ

ಕಣಗಲಾ ಗ್ರಾಮದ ಗ್ರಾಮ ಆಡಳಿತ (ಕಂದಾಯ) ಕಛೇರಿಯಲ್ಲಿ ಸಂಭ್ರಮದಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಲಕ News Desk | ಪ್ರಕಟಿಸಲಾಗಿದೆ August 15, 2026 August 15, 2026 | 02:28 PM 103 ವೀಕ್ಷಣೆಗಳು

ಕಣಗಲಾ ಆಗಸ್ಟ್ 15:ಗ್ರಾಮದ ಗ್ರಾಮ ಆಡಳಿತ ಕಛೇರಿಯ ಆವರಣದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮ ಹಾಗೂ ದೇಶಭಕ್ತಿ ಭಾವನೆಯೊಂದಿಗೆ ಆಚರಿಸಲಾಯಿತು. 1947ರ ಆಗಸ್ಟ್ 15ರಂದು ಭಾರತ ಸ್ವಾತಂತ್ರ್ಯ ಪಡೆದಿದ್ದು, 2026ರಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.


ಕಾರ್ಯಕ್ರಮದಲ್ಲಿ ಗ್ರಾಮ ಪ್ರಮುಖರಾದ ಶ್ರೀ ಮಹಾದೇವ ಮಲ್ಲಪ್ಪಾ ಮಗದುಮ ಇವರು ಧ್ವಜಾರೋಹಣ ನೆರವೇರಿಸಿದರು. ನಂತರ ರಾಷ್ಟ್ರಗೀತೆ ಮೊಳಗಿಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸಲಾಯಿತು.


ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮ ಆಡಳಿತ ಶ್ರೀ ವಿಠ್ಠಲ ಬುಗನಟ್ಟಿ ಅವರು, “ದೇಶದ ಸ್ವಾತಂತ್ರ್ಯಕ್ಕಾಗಿ ಅನೇಕ ಮಹನೀಯರು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ್ದಾರೆ. ಅವರ ಆದರ್ಶಗಳನ್ನು ಪಾಲಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.” ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಗ್ರಾಮ ಆಡಳಿತ ಅಧಿಕಾರಿ, ಸಿಬ್ಬಂದಿ, ಕಣಗಲಾ ಗೃಹ ರಕ್ಷಕ ದಳದ ಎಲ್ಲ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.


ಕೊನೆಯಲ್ಲಿ ಎಲ್ಲರಿಗೂ ಸಿಹಿ ವಿತರಿಸಲಾಯಿತು.